ಬೆಂಗಳೂರು: ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವೀತಿಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆ ಹೆಸರು: ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ
ಒಟ್ಟು ಹುದ್ದೆ: 5,431
ಉದ್ಯೋಗ ಸ್ಥಳ: ರಾಜ್ಯಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 25
ಉಳಿಕ ಮೂಲ ವೃಂದಕ್ಕೆ ಸಂಬಂಧಿಸಿದಂತೆ 2,163 ಪ್ರಥಮ ದರ್ಜೆ ಸಹಾಯಕರು ಹಾಗೂ 2,070 ದ್ವಿತೀಯ ದರ್ಜೆ ಸಹಾಯಕರು ಹಾಗೂ ಕಲ್ಯಾಣ ಕರ್ನಾಟಕ ವೃಂದದ 563 FDC ಹಾಗೂ 635 FDC ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಇವುಗಳಲ್ಲಿ ಪದವಿ ಹಾಗೂ ಪಿಯುಸಿ ಹಂತದ ಇತರ ಸಮಾನಾಂತರ ಹುದ್ದೆಗಳೂ ಸೇರಿವೆ ಎಂದು ಪ್ರಾಧಿಕಾರ ತಿಳಿಸಿದೆ.
ಪರೀಕ್ಷೆಗಳನ್ನು 2027ರ ಜನವರಿ 8, 9 , 10, 16 ಮತ್ತು 17ರಂದು ನಡೆಸುವುದಾಗಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹಾಗೂ ಡಿಪ್ಲೋಮಾ ಮುಗಿಸಿರಬೇಕು, ಗರಿಷ್ಠ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cetonline.karnataka.gov.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು.
ಇದನ್ನೂ ಓದಿ:ತುರ್ತು ಸಂದರ್ಭದಲ್ಲಿ ಸಾಲ ಪಡೆಯಲು ವೈಯಕ್ತಿಕ ಸಾಲಕ್ಕಿಂತ ಈ ಸಾಲ ಲಾಭದಾಯಕ: ಹೇಗೆ?



















