ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA Recruitment 2026) ಫಸ್ಟ್ ಡಿವಿಷನ್ ಕ್ಲರ್ಕ್ (ಎಫ್ ಡಿಎ) ಹಾಗೂ ಸೆಕೆಂಡ್ ಡಿವಿಷನ್ ಕ್ಲರ್ಕ್ (ಎಸ್ ಡಿಎ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು ಆರು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಒಟ್ಟು ಹುದ್ದೆಗಳು: 6
ಉದ್ಯೋಗ ಸ್ಥಳ: ಕರ್ನಾಟಕದಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 3
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ, ಪದವಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನಿಷ್ಠ 18ರಿಂದ 45 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ಮಾಜಿ ಸೈನಿಕರಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ವಿಶೇಷಚೇತನರು 250 ರೂ. ಶುಲ್ಕ ಪಾವತಿಸಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರು cetonline.karnataka.gov.in/kea ಗೆ ಭೇಟಿ ನೀಡಬೇಕು. ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 34,100– 83,700 ರೂ.ವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : ಉದ್ಯೋಗ ಕಳೆದುಕೊಂಡ್ರೆ 60 ದಿನಗಳಲ್ಲಿ ಅಮೆರಿಕ ತೊರೆಯುವ ಭೀತಿ : ಸಂಕಷ್ಟದಲ್ಲಿ ಭಾರತೀಯ ಟೆಕ್ಕಿಗಳು



















