ಬೆಂಗಳೂರು : ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ (KEONICS Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, 1 ಲೀಗಲ್ ಕನ್ಸಲ್ಟಂಟ್ ಹುದ್ದೆಯನ್ನು ಭರ್ತಿ ಮಾಡಿ ಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
ಒಟ್ಟು ಹುದ್ದೆಗಳು: 1
ಹುದ್ದೆಗಳ ಹೆಸರು: ಲೀಗಲ್ ಕನ್ಸಲ್ಟಂಟ್
ಅರ್ಜಿ ಸಲ್ಲಿಕೆ ವಿಧಾನ: ಇ-ಮೇಲ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 17
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಎಲ್ ಎಲ್ ಬಿ ಅಥವಾ ಎಲ್ ಎಲ್ ಎಂ ಕೋರ್ಸ್ ಮುಗಿಸಿರಬೇಕು. ಕಾನೂನು ವಿಭಾಗದಲ್ಲಿ 5 ವರ್ಷಗಳ ಕಾರ್ಯಾನುಭವ ಇರಬೇಕು. ಸಿವಿಲ್, ಕಾಂಟ್ರಾಕ್ಟ್, ಮ್ಯಾನ್ ಪವರ್ ಮತ್ತು ಕಾರ್ಪೊರೇಟ್ ಕಾನೂನುಗಳ ಬಗ್ಗೆ ಆಳವಾದ ಜ್ಞಾನ ಇರಬೇಕು. ಜತೆಗೆ ಲೀಗಲ್ ಡಾಕ್ಯುಮೆಂಟೇಶನ್ ಹಾಗೂ ಕೇಸ್ ಮ್ಯಾನೇಜ್ ಮೆಂಟ್ ಸಾಫ್ಟ್ ವೇರ್ ಬಳಸುವ ಪ್ರಾವೀಣ್ಯತೆ ಕಡ್ಡಾಯವಾಗಿದೆ. ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://www.keonics.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು (ಒಂದೇ ಪಿಡಿಎಫ್ ಫೈಲ್ ನಲ್ಲಿ) info@keonics.com ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!



















