ಬಾಗಲಕೋಟೆ : ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಭೀಮಪ್ಪ ರಬಕವಿ ಹಾಗೂ ಕಾನ್ಸ್‌ಟೇಬಲ್ ಸಂತೋಷ್ ಬಿರಾದಾರ ಎನ್ನುವರು ಮುತ್ತಪ್ಪ ನಾಯ್ಕರ್ ಎಂಬುವರಿಂದ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರಿಂದ ಯುವಕ ಗುಂಪು ಕೆರೂರು ಪೊಲೀಸ್ ಠಾಣೆ ಮುಂದೆಯೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದೆ.
ಸ್ಪೀಟ್ ಆಡುತ್ತಿದ್ದ ಓರ್ವ ಆರೋಪಿ ರಕ್ಷಣೆಗೆ ಮುಂದಾಗಿದ್ದ ಪೊಲೀಸರು, ಬೈಕ್ ಬಿಡಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಮುತ್ತಪ್ಪ ನಾಯ್ಕರ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರಿನ ಅನ್ವಯ ಲೋಕಾಯುಕ್ತ SP ಮಹಾಲಿಂಗ ನಂದಗಾಂವಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿ, ಪಿಎಸ್‌ಐ ಭೀಮಪ್ಪ, ಪಿಸಿ ಬಿರಾದಾರನನ್ನು 1.70 ಲಕ್ಷ ಲಂಚ ಸ್ವೀಕರಿಸುವಾಗ ಹಿಡಿದಿದ್ದರು. ಇದರ ಬೆನ್ನಲ್ಲೇ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಇನ್ಸ್ಪೆಕ್ಟರ್ ಭೀಮಪ್ಪ ತಮ್ಮ ವರ್ತನೆಯಿಂದ ಸಾರ್ವಜನಿಕರ ವಿರೋಧ ಕಟ್ಟಿಕೊಂಡಿದ್ದರು. ಅಲ್ಲದೇ ಪಿಎಸ್‌ಐ ವಿರುದ್ಧ ಹಲವು ಆರೋಪ ಕೇಳಿಬಂದಿದ್ದವು. ಇದೀಗ ಲೋಕಾಯುಕ್ತಕ್ಕೆ ಬಲೆಗೆ ಬೀಳುತ್ತಿದ್ದಂತೆಯೇ ಜನರು ಫುಲ್ ಖುಷ್ ಆಗಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನ ಮನೆಯಲ್ಲಿ ದಂಪತಿ ಶವವಾಗಿ ಪತ್ತೆ!



















