ಬೆಂಗಳೂರು : ಕರ್ನಾಟಕ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 750 ಫಾರೆಸ್ಟ್ ಅಬ್ಸರ್ವರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು: ಫಾರೆಸ್ಟ್ ಅಬ್ಸರ್ವರ್
ಒಟ್ಟು ಹುದ್ದೆ: 750
ಉದ್ಯೋಗ ಸ್ಥಳ: ಕರ್ನಾಟಕದ ಹಲವೆಡೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 31
ಬೆಂಗಳೂರು, ಬೆಳಗಾವಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಧಾರವಾಡ, ಹಾಸನ, ಕಲಬುರಗಿ, ಮಂಗಳೂರು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಫಿಸಿಕಲ್ ಟೆಸ್ಟ್ ಹಾಗೂ ಮೆಡಿಕಲ್ ಟೆಸ್ಟ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ aranya.gov.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಕೇಂದ್ರ ಸರ್ಕಾರದ NHSRCL ಸಂಸ್ಥೆಯಲ್ಲಿ 454 ಪೋಸ್ಟ್ ಖಾಲಿ : 1.10 ಲಕ್ಷ ರೂ. ಸ್ಯಾಲರಿ



















