ಮೈಸೂರು: ಸಿಎಂ ತವರು ಜಿಲ್ಲೆಯಲ್ಲಿ ಶಾಲೆಗಳಿಗೆ ವಿತರಣೆ ಮಾಡುವ ಅಕ್ಕಿಗೆ ಖದೀಮರು ಕನ್ನ ಹಾಕಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸಚಿವ ಹೆಚ್.ಸಿ. ಮಹದೇವಪ್ಪ ಪ್ರತಿನಿದಿಸುವ ಕ್ಷೇತ್ರವಾಗಿರುವ ಬನ್ನೂರಿನ ಎಪಿಎಂಸಿ ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿದ್ದ ಅಕ್ಕಿಯನ್ನು ಖದೀಮರು ದೋಚಿದ್ದಾರ ಎನ್ನಲಾಗಿದೆ.
ಇಲ್ಲಿನ ಗೋದಾಮಿನಲ್ಲಿಟ್ಟಿದ್ದ ಬರೋಬ್ಬರಿ 400 ಕ್ವಿಂಟಾಲ್ ಅಕ್ಕಿಯನ್ನು ಖದೀಮರು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬನ್ನೂರು ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಖದೀಮರನ್ನು ಪತ್ತೆ ಹಚ್ಚಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.