ಹಾವೇರಿ: ಯಾವುದ್ಯಾವುದೋ ಕಾರಣಕ್ಕೆ ಕೆಲವರು ಅಡ್ಡ ಹಾದಿ ಹಿಡಿದಿರುವುದನ್ನು ಕೇಳಿದ್ದೇವೆ. ಇಲ್ಲೊಬ್ಬ ಖದೀಮ, ವೇಶ್ಯೆಯರಿಗಾಗಿ ಕಳ್ಳತನ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.
ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೇಲೆ ನಿವಾಸಿ ಚಾಂದಬಾಷ್ ಬಂಧಿತ ಆರೋಪಿ. ಕಳ್ಳತನ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಆತನ ಕಳ್ಳತನದ ಉದ್ಧೇಶ ಕೇಳಿ ಪೊಲೀಸರು ಶಾಕ್ ಆಗಿದ್ದಾರೆ.
ವೇಶ್ಯೆಯರ ಜತೆ ಸರಸ ಸಲ್ಲಾಪವಾಡುವುದಕ್ಕಾಗಿ ಚಾಂದಬಾಷ್ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಕಳ್ಳತನ ಮಾಡಿ ಬೈಕ್ ಮಾಡಿ ಬಂದ ಹಣದಿಂದ ವೇಶ್ಯೆಯರ ಜೊತೆ ಸರಸಸಲ್ಲಾಪ ನಡೆಸುತ್ತಿದ್ದ ಎನ್ನಲಾಗಿದೆ. ಇಲ್ಲಿಯವರೆಗೆ 1.40 ಲಕ್ಷ ರೂ. ಮೌಲ್ಯದ 6 ಬೈಕ್ ಕದ್ದು ಮಾರಾಟ ಮಾಡಿದ್ದ ಎಂದು ತಿಳಿದು ಬಂದಿದೆ.
ಸದ್ಯ ಆರೋಪಿ ಬಂಧಿಸಿರುವ ಪೊಲೀಸರು 6 ಬೈಕ್ ಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.