ಬೆಂಗಳೂರು: ಅಹಿಂದ ನಾಯಕರು ಪ್ರಶ್ನಿಸುತ್ತಿರುವುದು ನನ್ನನ್ನಲ್ಲ. ಅವರು ಪ್ರಶ್ನಿಸುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ(Mallikarjun Kharge) ಅವರನ್ನು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(D.K. Shivakumar) ಟಾಂಗ್ ಕೊಟ್ಟಿದ್ದಾರೆ.
ನಾಯಕತ್ವ ಬದಲಾವಣೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಈ ಟಾಂಗ್ ಕೊಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ(Satish Jarakiholi) ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಮಾಧ್ಯಮದ ಎದುರು ಯಾರೂ ಮಾತನಾಡಬಾರದು. ಅಂತಹ ವಿಚಾರಗಳಿದ್ದರೆ, ನಾನೇ ಹೇಳುತ್ತೇನೆ. ರಣದೀಪ್ ಸಿಂಗ್ ಸುರ್ಜೇವಾಲ ಸಹ ಬೆಳಗಾವಿಗೆ ಬರುತ್ತಿದ್ದಾರೆ.
ಏನಾದರೂ ಇದ್ದರೆ ರಾಹುಲ್ ಗಾಂಧಿ(Rahul Gandhi), ಖರ್ಗೆ ಜತೆ ಮಾತನಾಡಲಿ. ಅವರ ಶ್ರಮಕ್ಕೆ ತಕ್ಕ ಸ್ಥಾನವನ್ನು ನಾಯಕರು ಕೊಡುತ್ತಾರೆ. ಶ್ರಮಪಟ್ಟು ನಾನು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಲ್ಲ, ಕಾರ್ಯಕರ್ತರು ತಂದಿದ್ದು. ಈ ಪಕ್ಷ ಯಾವಾಗಲೂ ಕಾರ್ಯಕರ್ತರ ಪಕ್ಷ ಎಂದು ಸ್ವ ಪಕ್ಷದಲ್ಲಿನ ವಿರೋಧಿಗಳಿಗೆ ಹೇಳಿದ್ದಾರೆ.