ಬೆಂಗಳೂರು: ನೀವು ಪಿಯುಸಿ, ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಅದರಲ್ಲೂ, ಬೆಂಗಳೂರು ಹಾಗೂ ಚಿಕ್ಕಮಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ಖಾಲಿ ಇರುವ 45 ಹುದ್ದೆಗಳ ನೇಮಕಾತಿಗಾಗಿ (KHPT Recruitment 2025) ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್
ಒಟ್ಟು ಹುದ್ದೆ: 45
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 30
ಉದ್ಯೋಗ ಸ್ಥಳ: ಬೆಂಗಳೂರು, ಚಿಕ್ಕಮಗಳೂರು
ಮ್ಯಾನೇಜರ್, ಕಮ್ಯುನಿಟಿ ಫೆಸಿಲಿಟೇಟರ್, ಡೆಪ್ಯುಟಿ ಡೈರೆಕ್ಟರ್, ತಾಲೂಕು ಕೋ-ಆರ್ಡಿನೇಟರ್ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪಿಯುಸಿ, ಬಿಎಸ್ಸಿ, ಎಂಬಿಎ, ಸ್ನಾತಕೋತ್ತರ ಪದವಿ, ಪಿಎಚ್.ಡಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಅರ್ಜಿಗಳ ಪರಿಶೀಲನೆ, ಅನುಭವ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಅಭ್ಯರ್ಥಿಗಳು ಮೊದಲಿಗೆ khpt.org ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
- ನಿಮ್ಮ ಆಸಕ್ತಿಯ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
- ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
- ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು