ಬೆಂಗಳೂರು: ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಲಭಿಸಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (KHPT Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅಡ್ಮಿನ್ ಆಫೀಸರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್
ಒಟ್ಟು ಹುದ್ದೆ: 01
ಹುದ್ದೆ ಹೆಸರು: ಅಡ್ಮಿನ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 11
ಉದ್ಯೋಗ ಸ್ಥಳ: ವಿಜಯಪುರ
ಗುಮ್ಮಟ ನಗರಿ ವಿಜಯಪುರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಿ, ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ khpt.org ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ಅಡ್ಮಿನ್ ಆಫೀಸರ್ ಹುದ್ದೆಯ ನೇಮಕಾತಿ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ : ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!



















