ಬೆಂಗಳೂರು: ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (KHPT Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಂದು ಡೈರೆಕ್ಟರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್
ಒಟ್ಟು ಹುದ್ದೆ: 1
ಹುದ್ದೆ ಹೆಸರು: ಡೈರೆಕ್ಟರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 4
ಉದ್ಯೋಗ ಸ್ಥಳ: ಬೆಂಗಳೂರು
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸಿಎ, ಎಂಬಿಎ ಕೋರ್ಸ್ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಿ, ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹಣಕಾಸು ಕ್ಷೇತ್ರದಲ್ಲಿ ಸುಮಾರು 18-20 ವರ್ಷ ಕಾರ್ಯಾನುಭವ ಇದ್ದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ khpt.org ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ಡೈರೆಕ್ಟರ್ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ: ಕೇಂದ್ರ ಸರ್ಕಾರದ NMPT ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಯ ನೇಮಕಾತಿ : 2.20 ಲಕ್ಷ ರೂ. ಸಂಬಳ



















