ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ (KHPT Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಫೀಲ್ಡ್ ಇನ್ವೆಸ್ಟಿಗೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್
ಒಟ್ಟು ಹುದ್ದೆ: 8
ಹುದ್ದೆ ಹೆಸರು: ಫೀಲ್ಡ್ ಇನ್ವೆಸ್ಟಿಗೇಟರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 5
ಉದ್ಯೋಗ ಸ್ಥಳ: ಮೈಸೂರು
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಿ, ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಅಭ್ಯರ್ಥಿಗಳು ಮೊದಲಿಗೆ khpt.org ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
- ನರ್ಸ್ ಹಾಗೂ ಕೌನ್ಸೆಲರ್ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
- ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
- ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ : ಚಾರ್ಟರ್ಡ್ ಸಹಕಾರಿ ಬ್ಯಾಂಕ್‌ನಲ್ಲಿ 9 ಹುದ್ದೆಗಳ ನೇಮಕ | ಬೆಂಗಳೂರಲ್ಲೇ ಉದ್ಯೋಗ



















