ನಟ ಕಿಚ್ಚ ಸುದೀಪ್ (Kiccha Sudeep) ಸಿನಿಮಾದೊಂದಿಗೆ ಸಮಾಜಮುಖಿ ಕೆಲಸ ಕೂಡ ಮಾಡುತ್ತಾರೆ. ಅಭಿಮಾನಿಯ ಪುಟ್ಟ ಮಗಳ ಚಿಕಿತ್ಸೆಗಾಗಿ ಸಹಾಯ ಮಾಡುವಂತೆ ವಿಡಿಯೋ ಮೂಲಕ ಸುದೀಪ್ ಮನವಿ ಮಾಡಿದ್ದಾರೆ.
ಈ ವಿಡಿಯೋ ನೋಡುತ್ತಿರುವ ಪ್ರತಿಯೊಬ್ಬರಿಗೂ ಕಿಚ್ಚನ ನಮಸ್ತೇ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ಹಾಗೂ ಅವರ ಪತ್ನಿ ನಾಗಶ್ರೀ ದಂಪತಿಗೆ 1 ವರ್ಷ 10 ತಿಂಗಳ ಪುಟ್ಟ ಮಗಳು (Baby Girl) ಇದ್ದಾಳೆ. ಮಗುವಿನ ಹೆಸರು ಕೀರ್ತನಾ. ಮುಗ್ಧ ಕಂದಮ್ಮನಿಗೆ ಸ್ಪೈನ್ ಮ್ಯಾಸ್ಕ್ಯೂಲಾರ್ ಅಟ್ರೋಫಿ (SMA2) ಎಂಬ ಆರೋಗ್ಯ ಸಮಸ್ಯೆ ಇದೆ. ಅಪರೂಪದ ಕಾಯಿಲೆ. ಈ ಕಾಯಿಲೆಗೆ ಔಷಧಿ ಇದೆ. ಗುಣ ಆಗುವ ಸಾಧ್ಯತೆಯಿದೆ.
ಆ ವೈದ್ಯಕೀಯ ಚಿಕಿತ್ಸೆಗೆ ಬೇಕಾದ ಹಣ ಎಷ್ಟು ಎಂದು ಕೇಳಿದಂತೆ ಮೈ ಜುಮ್ ಅನಿಸುತ್ತದೆ. ಚಿಕಿತ್ಸೆಗೆ ಬೇಕಾಗಿರುವುದು 16 ಕೋಟಿ ರೂ, ಪೋಷಕರು ಆಸ್ತಿಯನ್ನು ಮಾರಿ ಮಗುವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ನನ್ನ ಕೈಲಾದ ಸಹಾಯ ನಾನು ಮಾಡಿದ್ದೀನಿ. ನೀವು ನಿಮ್ಮ ಕೈಯಲ್ಲಿ ಆದಷ್ಟು ಸಹಾಯ ಮಾಡಿ ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.