ಮುಂಬೈ: ಮುಂಬೈ ವಿರುದ್ಧ ನಡೆದ ಪಂದ್ಯದಲ್ಲಿ ಕಿಂಗ್ ಕೊಹ್ಲಿ (Virat Kohli) ಮತ್ತೊಂದು ದಾಖಲೆಗೆ ಸಾಕ್ಷಿಯಾಗಿದ್ದಾರೆ.
ಬುಮ್ರಾ ಎಸೆದ ಮೊದಲ ಎಸೆತದಲ್ಲಿ ವಿರಾಟ್ ಕೊಹ್ಲಿ 6 ರನ್ ಗಳಿಸುವುದರ ಮೂಲಕ ಟಿ20 ಕ್ರಿಕೆಟ್‌ನಲ್ಲಿ 13 ಸಾವಿರ ರನ್ ಗಳನ್ನು ಪೂರ್ಣಗೊಳಿಸಿದ ಸಾಧನೆ ಮಾಡಿದರು. ಕೊಹ್ಲಿ 386 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದು, ಈ ಮೂಲಕ ಅತಿ ವೇಗವಾಗಿ 13 ಸಾವಿರ ಟಿ20 ರನ್ ಪೂರೈಸಿದ ಏಷ್ಯಾದ ಮೊದಲ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. 381 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ಕ್ರಿಸ್ ಗೇಲ್ ದಾಖಲೆಯನ್ನು ತಮ್ಮ ಹೆಸರಿನಲ್ಲಿಟ್ಟುಕೊಂಡಿದ್ದಾರೆ. ಟಿ20ಯಲ್ಲಿ 13 ಸಾವಿರ ರನ್ ಗಳಿಸಿದ ಮೊದಲ ಭಾರತೀಯ ಎಂಬ ದಾಖಲೆಯೂ ಈಗ ಕಿಂಗ್ ಪಾಲಾಗಿದೆ.
ಟಿ20 ಕ್ರಿಕೆಟ್‌ನಲ್ಲಿ ಕೇವಲ ಐದು ಬ್ಯಾಟ್ಸ್‌ಮನ್‌ಗಳು 13 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಕ್ರಿಸ್ ಗೇಲ್ 14,562 ರನ್ ಗಳಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ಅಲೆಕ್ಸ್ ಹೇಲ್ಸ್ 13,610 ರನ್, ಶೋಯೆಬ್ ಮಲಿಕ್ 13,557 ರನ್ ಹಾಗೂ ಕೀರನ್ ಪೊಲಾರ್ಡ್ 13,537 ರನ್ ಗಳಿಸಿದ್ದಾರೆ. ಈಗ ಕಿಂಗ್ ಕೊಹ್ಲಿ ಈ ಕ್ಲಬ್ ಸೇರಿಕೊಂಡಿದ್ದಾರೆ.