ಬೆಂಗಳೂರು: ನೀವು ಈಗಷ್ಟೇ ಐಟಿಐ, ಡಿಪ್ಲೋಮಾ ಕೋರ್ಸ್ ಮುಗಿಸಿದ್ದೀರಾ? ಸರ್ಕಾರದ ಸಂಸ್ಥೆಯಲ್ಲಿ ವೃತ್ತಿ ತರಬೇತಿ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ (KIOCL Recruitment 2026) ಇರುವ 11 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೈಮಕಾತಿ ಸಂಸ್ಥೆ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್
ಒಟ್ಟು ಹುದ್ದೆ: 11
ಉದ್ಯೋಗ ಸ್ಥಳ: ಮಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 6
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ, ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 9 ಸಾವಿರ ರೂ. ಸ್ಟೈಪೆಂಡ್ ನೀಡಲಾಗುತ್ತದೆ. ಮೆರಿಟ್ ಹಾಗೂ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ kioclltd.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಕೆಯ ಪ್ರತಿಯನ್ನು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ; ಕೇಂದ್ರ ಸರ್ಕಾರದ AERA ಸಂಸ್ಥೆಯಲ್ಲಿ 09 ಹುದ್ದೆಗಳ ನೇಮಕಾತಿ | 1 ಲಕ್ಷ ರೂಪಾಯಿ ಸ್ಯಾಲರಿ



















