ಕುಂದಾಪುರ: ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲದ ಘಟನೆ ಉಡುಪಿ ಜಿಲ್ಲೆಯ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ತು ಬೀಚ್ ನಲ್ಲಿ ಆ.14ರ ಮಂಗಳವಾರ ನಡೆದಿದೆ.
ಸಂಕೇತ್ (16), ಸೂರಜ್ (15), ಆಶೀಶ್ (14) ನೀರು ಪಾಲಾದವರು.ಮೂವರು ಕೂಡ ಸ್ಥಳೀಯರು ಎಂದು ವರದಿಯಾಗಿದೆ.
ಈಜಲು ತೆರಳಿದ್ದ ನಾಲ್ವರಲ್ಲಿ ಓರ್ವ ಪಾರಾಗಿದ್ದಾನೆ. ನೀರುಪಾಲಾದ ಮೂವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ತಾಲ್ಲೂಕಿನ ಪಿಎಸ್ ಐ ತಿಮ್ಮೇಶ್ ಸೇರಿ ಮೊದಲಾದವರು ಭೇಟಿ ನೀಡಿದ್ದಾರೆ.