ಬೆಂಗಳೂರು: ‘ಸೆಲೆಬ್ರಿಟಿ ಕ್ರಿಕೆಟ್ ಲೀಗ್’ನಲ್ಲಿ (ಸಿಸಿಎಲ್) ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಈಗ ಸಿನಿಮಾದಿಂದ ಬ್ರೇಕ್ ಪಡೆದಿದ್ದಾರೆ. ‘ಕರ್ನಾಟಕ ಬುಲ್ಡೋಜರ್ಸ್’ ತಂಡದ ಪರವಾಗಿ ಆಡುತ್ತಿರುವ ಅವರು ಟೀಂನ ಹೈಲೈಟ್ ಆಗಿದ್ದಾರೆ. ಈಗಾಗಲೇ ಮೊದಲ ಪಂದ್ಯವನ್ನು ಗೆದ್ದಿದ್ದಾರೆ. ಈ ಮಧ್ಯೆ ಅವರು ಮೆಟ್ರೋದಲ್ಲಿ ಸಂಚರಿಸಿದ್ದು, ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ.
ಮೊದಲ ಪಂದ್ಯ ಗೆದ್ದ ಖುಷಿಯಲ್ಲಿರುವ ಸುದೀಪ್, ಎರಡನೇ ಪಂದ್ಯಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ರಿಕೆಟ್ ಆಡಿ ಮೆಟ್ರೋದಲ್ಲಿ ಸಂಚಾರ ಮಾಡುತ್ತಿರುವ ವಿಡಿಯೋ ಹಾಗೂ ಫೋಟೋಗಳು ಈಗ ವೈರಲ್ ಆಗಿವೆ.
ಫೆ. 15ರಂದು ಶನಿವಾರ ಕರ್ನಾಟಕ ಬುಲ್ಡೋಜರ್ಸ್ ತಂಡ(Karnataka Bulldozers team) ,ಮುಂಬೈ ಹೀರೋಸ್ ತಂಡವನ್ನು(Mumbai Heroes team) ಎದುರಿಸಲಿದೆ. ಹೈದರಾಬಾದ್ ನಲ್ಲಿ ಮಧ್ಯಾಹ್ನ 2ಕ್ಕೆ ಈ ಪಂದ್ಯ ನಡೆಯಲಿದೆ. ಈ ಪಂದ್ಯದ ಸಿದ್ಧತೆಗಾಗಿ ಕರ್ನಾಟಕ ತಂಡದವರು ಹೈದರಾಬಾದ್ ನಲ್ಲಿ ಪ್ರಾಕ್ಟಿಸ್ ಮಾಡುತ್ತಿದ್ದಾರೆ. ಈ ವೇಳೆ ಮೆಟ್ರೋದಲ್ಲಿ ಸುತ್ತಾಡುತ್ತಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮ ಸರಳತೆ ಗ್ರೇಟ್ ಎಂದು ಹೇಳುತ್ತಿದ್ದಾರೆ.