ಗುವಾಹಟಿ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ತಂಡ ಕೇಕೆ ಹಾಕಿದೆ. ಕ್ವಿಂಟನ್ ಡಿಕಾಕ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ಕೋಲ್ಕತ್ತಾ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ತನ್ನ ಎರಡನೇ ಪಂದ್ಯದಲ್ಲಿ ಕೆಕಾರ್ ಗೆಲುವಿನ ಖಾತೆ ತೆರೆದಿದೆ.
ಕ್ವಿಂಟನ್ ಡಿಕಾಕ್ ಉತ್ತಮ ಬ್ಯಾಟಿಂಗ್ ಹಾಗೂ ಬೌಲರ್ಗಳ ಸಂಘಟಿತ ಪ್ರದರ್ಶನದಿಂದಾಗಿ ಕೆಕೆಆರ್ 8 ವಿಕೆ0ಟ್ಗಳ ಸುಲಭ ಜಯ ಸಾಧಿಸಿದೆ. ರಾಜಸ್ಥಾನ್ ರಾಯಲ್ಸ್ ನೀಡಿದ್ದ 152 ರನ್ಗಳ ಗುರಿಯನ್ನ ಬೆನ್ನಟ್ಟಿದ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಕೇವಲ 17.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 153 ರನ್ ಗಳಿಸಿ ಗೆಲುವಿನ ಕೇಕೆ ಹಾಕಿದೆ.
152 ರನ್ಗಳ ಗುರಿ ಬೆನ್ನಟ್ಟಿದ ಕೆಕೆಆರ್ ತಂಡ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನರೈನ್ ಬದಲಿಗೆ ತಂಡ ಸೇರಿದ್ದ ಅನುಭವಿ ಮೊಯೀನ್ ಅಲಿ 12 ಎಸೆತಗಳನ್ನಾಡಿ ಕೇವಲ 4 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ನಾಯಕ ರಹಾನೆ ಇಂದು 18 ರನ್ ಗಳಿಸಿ ಕ್ಯಾಚ್ ಔಟ್ ಆದರು. ಇನ್ನೊಂದೆಡೆ ಕಾಕ್ ಉತ್ತಮ ಬ್ಯಾಟಿಂಗ್ ಮುಂದುವರೆಸಿದರು. 61 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 8 ಬೌಂಡರಿಗಳೊಂದಿಗೆ ಅಜೇಯ 97 ರನ್ ಗಳಿಸಿದರು. ಇವರಿಗೆ ಸಾಥ್ ನೀಡಿದ ಅಂಗ್ಕ್ರಿಶ್ ರಘುವಂಶಿ 17 ಎಸೆತಗಳಲ್ಲಿ 2 ಬೌಂಡರಿಗಳೊಂದಿಗೆ ಅಜೇಯ 22 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.