ಮುಂಬಯಿ: ಚಾಂಪಿಯನ್ಸ್ ಟ್ರೋಫಿ ಗೆದ್ದು ಖುಷಿಯಲ್ಲಿರುವ ಕೆ.ಎಲ್. ರಾಹುಲ್ ಮನೆಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ.

ಕನ್ನಡಿಗ ಕೆ.ಎಲ್ ರಾಹುಲ್-ಅಥಿಯಾ ಶೆಟ್ಟಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸದ್ಯದಲ್ಲೇ ಅಥಿಯಾ ತಾಯಿಯಾಗಲಿದ್ದಾರೆ. ರಾಹುಲ್, ಅಥಿಯಾ ಶೆಟ್ಟಿ ದಂಪತಿ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ್ದು, ತಮ್ಮ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಮತ್ತು ವಿಡಿಯೋ ಈಗ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಈ ದಂಪತಿಗೆ ಹಾರೈಸುತ್ತಿದ್ದಾರೆ.