ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF SHIMUL Recruitment 2025 Recruitment 2026) ದಲ್ಲಿ ಖಾಲಿ ಇರುವ 194 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 194 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF SHIMUL)
ಒಟ್ಟು ಹುದ್ದೆಗಳು : 27
ಹುದ್ದೆ ಹೆಸರು: ಸಹಾಯಕ ವ್ಯವಸ್ಥಾಪಕ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 21
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಬಿ.ಇ., ಬಿ.ಟೆಕ್ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಸಿಸ್ಟಂಟ್ ಮ್ಯಾನೇಜರ್, ಜೂನಿಯರ್ ಟೆಕ್ನಿಶಿಯನ್, ಟೆಕ್ನಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 1.55 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. 18ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು shimul.coop ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಬೆಸ್ಕಾಂನಲ್ಲಿ ಖಾಲಿ ಇರುವ 520 ಹುದ್ದೆಗಳ ನೇಮಕಾತಿ |ಕೂಡಲೇ ಅರ್ಜಿ ಸಲ್ಲಿಸಿ



















