ಬೆಂಗಳೂರು : ಹಾಲು, ಮೊಸರು ಆಯ್ತು ಈಗ ನಂದಿನಿ ತುಪ್ಪದ ಬೆಲೆಯೂ ಕೂಡ ಏರಿಕೆಯಾಗಿದೆ. ದಿಢೀರ್ ಬೆಲೆ ಏರಿಕೆಯಿಂದ ಜನತೆಗೆ ಬರೆ ಎಳೆದಂತಾಗಿದ್ದು, ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಹೌದು.. ಜಿಎಸ್‌ಟಿ ದರ ಇಳಿಕೆ ಸಂಭ್ರಮದಲ್ಲಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (KMF) ಶಾಕ್ ಕೊಟ್ಟಿದ್ದು, ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದೆ. ಇಂದಿನಿಂದಲೇ ಈ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ.
ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಹೆಚ್ಚಾಗಿದೆ. ತುಪ್ಪ ಹೊರತುಪಡಿಸಿ ಇತರೇ ನಂದಿನಿ ಉತ್ಪನ್ನಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಇದನ್ನೂ ಓದಿ : ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ | ಮೂವರು ಸ್ಥಳದಲ್ಲೇ ದುರ್ಮರಣ!



















