ತುಮಕೂರು:ವಿಧಾನ ಪರಿಷತ್ ಚುನಾವಣಾ ಫಲಿತಾಂಶದ ಬಗ್ಗೆ ತುಮಕೂರಿನಲ್ಲಿ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ನಾಲ್ಕೂ ಕ್ಷೇತ್ರಗಳ ಫಲಿತಾಂಶ ಕಾಂಗ್ರೆಸ್ನಲ್ಲಿ ನಿರಾಸೆ ಮೂಡಿಸಿದೆ ಎಂದಿದ್ದಾರೆ. ಈ ಚುನಾವಣಾ ವ್ಯಾಪ್ತಿಯಲ್ಲಿ 35 ಅಸೆಂಬ್ಲಿ ಕ್ಷೇತ್ರಗಳು ಬದಲಿಗಿದ್ದು, ಅದರಲ್ಲಿ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರೇ ಇದ್ದರೂ ನಾವು ಸೋತಿರುವುದು ನಿಜಕ್ಕೂ ವಿಪರ್ಯಾಸ ಮತ್ತು ನಮ್ಮವರೇ ಸರಿಯಾಗಿ ಕೆಲಸ ಮಾಡದಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ಸ್ವಪಕ್ಷದವರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರನ್ನು ಸೈಡ್ಲೈನ್ ಮಾಡಿದ್ದರಿಂದ ಸೋಲಾಗಿದೆ ಎಂಬ ವಿಚಾರಕ್ಕೆ, ಸಿದ್ದರಾಮಯ್ಯ ಕಾಂಗ್ರೆಸ್ನ ಆಸ್ತಿ ಎಂದಿರುವ ರಾಜಣ್ಣ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ. ಇವತ್ತಿನ ಪಾಲಿಟಿಕ್ಸ್ ಬಹಳ ಫಾಸ್ಟ್ ಆಗಿದ್ದು, ಜನರು ಕ್ಷಣಾರ್ಧದಲ್ಲಿ ಮಾಹಿತಿ ಪಡೆದು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.


















