ಬೆಂಗಳೂರು: ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಅದರಲ್ಲೂ, ಕೊಡಗು (Kodagu AYUSH Recruitment 2026) ಜಿಲ್ಲೆಯವರು ತಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಲು ಇದು ಒಳ್ಳೆಯ ಅವಕಾಶವಾಗಿದೆ. ಹೌದು, ಕೊಡಗು ಆಯುಷ್ ಇಲಾಖೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಆಯುಷ್ ಇಲಾಖೆ, ಕೊಡಗು
ಹುದ್ದೆಗಳ ಹೆಸರು: ಕಮ್ಯುನಿಟಿ ಹೆಲ್ತ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆಗಳು: 2
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 12
ಕೊಡಗು ಜಿಲ್ಲೆ ಶ್ರೀಮಂಗಲದ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ 1 ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಬಿಎಎಂಎಸ್ ಕೋರ್ಸ್ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಹಾಗೆಯೇ, ವಿರಾಜಪೇಟೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ 1 ಮಲ್ಟಿಪರ್ಪಸ್ ವರ್ಕರ್ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿ ಹೊಂದಿದವರಿಗೆ ಮಾಸಿ 16,900 ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://zpkodagu.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಮಹದೇವಪೇಟೆ, ಮಡಿಕೇರಿ – 571201, ಕೊಡಗು.
ದೂರವಾಣಿ: (08272) 295128
ಇ-ಮೇಲ್: dao.madikeri09@gmail.com
ಇದನ್ನೂ ಓದಿ :ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!


















