ಬೆಂಗಳೂರು : ಕೋಗಿಲು ಲೇಔಟ್ ಒತ್ತುವರಿ ತೆರವು ಪ್ರಕರಣದ ಸಂಬಂಧ ದಿನಕ್ಕೊಂದು ತಿರುವು ಕಂಡು ಬರುತ್ತಿದ್ದು, ಕೋಗಿಲು ಲೇಔಟ್‌ನ ಸರ್ಕಾರಿ ಜಾಗಕ್ಕಾಗಿ ಸ್ಥಳೀಯರಿಂದ ಹಣ ವಸೂಲಿ ಮಾಡಿರುವ ಆರೋಪದ ಸಂಬಂಧ ಇದೀಗ ಇಬ್ಬರನ್ನು ಬಂಧಿಸಲಾಗಿದೆ.
ಸ್ಥಳೀಯರಿಂದ ಹಣ ಪಡೆದು ಅನಧಿಕೃತ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ವಿಜಯ್, ವಾಸಿಂ ಉಲ್ಲಾ ಬೇಗ್, ಮುನಿ ಆಂಜನಪ್ಪ ಮತ್ತು ರಾಬೀನ್ ಎಂಬುವವರ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪೈಕಿ ಇದೀಗ ವಿಜಯ್ ಹಾಗೂ ವಾಸಿಂ ಉಲ್ಲಾ ಬೇಗ್ ಅವರನ್ನು ಬಂಧಿಸಿ ಪೋಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇಬ್ಬರನ್ನ ನ್ಯಾಯಾಲಯ ಮುಂದೆ ಹಾಜರು ಪಡಿಸಿ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಾಹಣಾ ಕಂಪನಿ (ಬಿಎಸ್‌ಡಬ್ಲ್ಯೂಎಂಎಲ್) ಎಂಜಿನಿಯರ್ ಸಂತೋಷ್ ಕುಮಾರ್ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ | ಐಸಿಯುಗೆ ದಾಖಲು


















