ವಿಶಾಖಪಟ್ಟಣಂ : ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯದ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಟೀಮ್ ಇಂಡಿಯಾದ ಹಿರಿಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮೂರು ಪಂದ್ಯಗಳ ಸರಣಿಯಲ್ಲಿ ಎರಡು ಶತಕ ಮತ್ತು ಒಂದು ಅರ್ಧಶತಕ ಗಳಿಸುವ ಮೂಲಕ ಕೊಹ್ಲಿ ತಮ್ಮ ಫಾರ್ಮ್ ಅನ್ನು ಮರುಕಳಿಸಿದರು.
ಭಾನುವಾರ ಕೊಹ್ಲಿ ಏಕಾಂಗಿಯಾಗಿ ದೇವಸ್ಥಾನಕ್ಕೆ ಭೇಟಿ ನೀಡಿ ವರಾಹ ಲಕ್ಷ್ಮಿ ನರಸಿಂಹನಿಗೆ ಪ್ರಾರ್ಥನೆ ಸಲ್ಲಿಸಿ, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಕೊಹ್ಲಿ ತಂಡಕ್ಕೆ ಕಮ್‌ಬ್ಯಾಕ್ ಮಾಡಲು ಕಷ್ಟ ಅನುಭವಿಸಿದ್ದರು. ಆದಾಗ್ಯೂ, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅವರು ತಮ್ಮ ಲಯ ಕಂಡುಕೊಂಡರು. ಆ ಬಳಿಕ ಸರಣಿಯಲ್ಲಿ ಒಟ್ಟು 300 ಪ್ಲಸ್ ರನ್ ಕಲೆಹಾಕಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸರಣಿ ಶ್ರೇಷ್ಠ ಪಡೆಯವ ಮೂಲಕ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20ನೇ ಬಾರಿಗೆ ಈ ಪ್ರಶಸ್ತಿಗೆ ಭಾಜನರಾದರು. ಇದೇ ವೇಳೆ 19 ಬಾರಿ ಸರಣಿ ಶ್ರೇಷ್ಠಪಡೆದಿದ್ದ ಸಿನ್ ತೆಂಡೂಲ್ಕರ್ ದಾಖಲೆ ಪತನಗೊಂಡಿತು.
ಇದನ್ನೂ ಓದಿ : ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 25 ಸಾವಿರ ರೂ. : ಅರ್ಜಿ ಸಲ್ಲಿಸುವುದು ಹೇಗೆ?



















