ಕಳೆದ 17 ಸೀಸನ್ ಗಳಿಂದಲೂ ಚಾಂಪಿಯನ್ ಆಗ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊಹ್ಲಿ ನಾಯಕ ಆಗುವ ಸಾಧ್ಯತೆ ಎನ್ನಲಾಗುತ್ತಿದೆ.
ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್ಸಿಬಿ ಫೈನಲ್ ಪ್ರವೇಶಿಸದೆ 8 ವರ್ಷ ಕಳೆದಿವೆ. ಕಳೆದ ಸೀಸನ್ನಲ್ಲಿ ಆರ್ಸಿಬಿ 14 ಪಂದ್ಯಗಳಲ್ಲಿ 7 ಪಂದ್ಯ ಗೆದ್ದಿತ್ತು. ಹೀಗಾಗಿ ಈ ಬಾರಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿ ಬರುತ್ತಿವೆ. ನಾಯಕ ಫಾಫ್ ಡುಪ್ಲೆಸಿಸ್ಗೆ ಈಗ 40 ವರ್ಷ. ಹೀಗಾಗಿ ಆರ್ಸಿಬಿ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ.
ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳುತ್ತಿದ್ದಂತೆ ಮತ್ತೆ ನಾಯಕತ್ವದ ಚರ್ಚೆಗಳು ಆರಂಭವಾಗಿವೆ. ಹಿಂದೆ ಭಾರತ ತಂಡದ ನಾಯಕತ್ವದ ಹೊರೆಯ ಹಿನ್ನೆಲೆಯಲ್ಲಿ ಅವರು ಆರ್ ಸಿಬಿ ನಾಯಕತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದರು. ಈಗ ಕೊಹ್ಲಿ ಮತ್ತೆ ಆರ್ ಸಿಬಿ ನಾಯಕರಾಗುತ್ತಿದ್ದಾರೆ ಎನ್ನಲಾಗುತ್ತಿದೆ.
ಐಪಿಎಲ್ 2025 ರಿಂದ ಕಿಂಗ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಈಗಾಗಲೇ ವಿರಾಟ್ ಕೊಹ್ಲಿ ಆರ್ಸಿಬಿ ಫ್ರಾಂಚೈಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಇದೇ ವೇಳೆ ನಾಯಕತ್ವ ವಹಿಸಿಕೊಳ್ಳುವ ಬಗ್ಗೆ ಕೂಡ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ. ಹಿಂದೆ ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿರುವ ವಿರಾಟ್ ಕೊಹ್ಲಿ 66 ಪಂದ್ಯಗಳಲ್ಲಿ ಜಯ ಗಳಿಸಿದ್ದರು. ಕೊಹ್ಲಿ ನಾಯಕತ್ವದಲ್ಲೇ ಆರ್ಸಿಬಿ 2016 ರಲ್ಲಿ ಫೈನಲ್ ಪ್ರವೇಶಿಸಿತ್ತು. 3 ಬಾರಿ ಪ್ಲೇ ಆಫ್ ಆಡಿತ್ತು.