ಕೋಲಾರ : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಅಬ್ಬೇನಹಳ್ಫಿ ಬಳಿ ನಡೆದಿದೆ.
ಬೆಂಗಳೂರು-ಚನ್ನೈ ಎಕ್ಸ್‌ಪ್ರೆಸ್ ಹೈ ವೇ ಕಳೆದ ಮಧ್ಯೆ ರಾತ್ರಿ ಸಂಬವಿಸಿದೆ. ಗೋಪಿ(38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಎಂಬುವವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ನಾಲ್ವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮಾಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ : ಮಡಿಕೇರಿ | ಫುಟ್ಬಾಲ್ ಪಂದ್ಯದ ವೇಳೆ ಎರಡು ತಂಡದ ಬೆಂಬಲಿಗರ ನಡುವೆ ಘರ್ಷಣೆ



















