ಕೋಲಾರ : ಕಂಟೈನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂದ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಗಂಗವರಂ ಬಳಿ ನಡೆದಿದೆ.
ಮೊಹನ್ ಬಾಬು (71), ನಾಗರಾಜರಾವು (61), ಕುಸುಮ (61), ಜಯಂತಿ (59), ಪೂಜ (33) ಸಾವನ್ನಪ್ಪಿರುವವರು. ಕಾರು ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದು, ಈ ವೇಳೆ ಕಾರು ನಿಯಂತ್ರಣ ತಪ್ಪಿ ಕಂಟೈನರ್‌ಗೆ ಗುದ್ದಿದೆ ಎನ್ನಲಾಗುತ್ತಿದೆ.
ಈ ಘಟನೆಯು ಪಲಮನೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ, ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಎಕ್ಸಾಮ್ ಭಯಕ್ಕೆ ಮನೆ ಬಿಟ್ಟು ಹೋದ ವಿದ್ಯಾರ್ಥಿನಿಯರು!?



















