ಕೋಲಾರ : ಕೋಲಾರ ಜಿಲ್ಲೆಯಲ್ಲಿ ಇಂದು ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯುವ ಹಿನ್ನಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕೋಲಾರಕ್ಕೆ ಆಗಮಿಸಿದ್ದಾರೆ.
ಸಚಿವ ಭೈರತಿ ಸುರೇಶ್ ಅವರು ಕೋಲಾರ ನಗರದ ಆರ್.ಎಲ್ ಜಾಲಪ್ಪ ಆಸ್ಪತ್ರೆಯ ಹೆಲಿಪ್ಯಾಡ್‌ಗೆ ಬಂದಿಳಿದಿದ್ದು, ಈ ವೇಳೆ ಶಾಸಕ ಕೊತ್ತೂರು ಮಂಜುನಾಥ್ ಅವರೊಂದಿಗೆ ಆಗಮಿಸಿದ್ದರು. ಹೆಲಿಪ್ಯಾಡ್‌ನಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಸಚಿವರ ಒಡೆತನದ ಹೆಲಿಕಾಪ್ಟರ್‌ನ್ನು ನೋಡುವುದಕ್ಕಾಗಿ ಸ್ಥಳೀಯರು ಮತ್ತು ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಹಲವರು ಹೆಲಿಕಾಪ್ಟರ್ ಬಳಿ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದಿದ್ದು, ಕೆಲಕಾಲ ಕುತೂಹಲದ ವಾತಾವರಣ ನಿರ್ಮಾಣವಾಗಿತ್ತು. ಸಚಿವರ ಭೇಟಿ ಹಿನ್ನಲೆಯಲ್ಲಿ ಕೋಲಾರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ.
ಇದನ್ನೂ ಓದಿ : ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ | ದುಬೈಗೆ ತೆರಳುತ್ತಿದ್ದ ಮಹಿಳೆಯ ಲಗೇಜ್‌ನಲ್ಲಿದ್ದ ಆಭರಣ ಮಾಯ



















