ಬೆಂಗಳೂರು: ನೀವು ಕೊಪ್ಪಳ ಜಿಲ್ಲೆಯವರಾ? ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಡಿಪ್ಲೋಮಾ ಕೋರ್ಸ್ ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಹೌದು, ಕೊಪ್ಪಳ ಜಿಲ್ಲಾ ನ್ಯಾಯಾಲಯವು ಎರಡು ಹುದ್ದೆಗಳ ನೇಮಕಾತಿಗಾಗಿ (Koppal District Court Recruitment 2025) ಅಧಿಸೂಚನೆ ಹೊರಡಿಸಿದೆ. ಎರಡು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೊಪ್ಪಳ ಜಿಲ್ಲಾ ನ್ಯಾಯಾಲಯ
ಹುದ್ದೆ ಹೆಸರು: ಡೇಟಾ ಎಂಟ್ರಿ ಆಪರೇಟರ್
ಒಟ್ಟು ಹುದ್ದೆಗಳು: 02
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 15
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಅಥವಾ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 15 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. 18 ವರ್ಷ ದಾಟಿದವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ koppal.dcourts.gov.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Office of the Prl. District and Sessions Judge, Koppal, Gavimath Road, Koppal-583231.
ಇದನ್ನೂ ಓದಿ: ರೇಷ್ಮೆ ಮಂಡಳಿಯಲ್ಲಿ 4 ಹುದ್ದೆಗಳ ನೇಮಕಾತಿ: ಸಂದರ್ಶನದ ದಿನಾಂಕ ಇಲ್ಲಿದೆ



















