ಕೊಪ್ಪಳ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಹಾಗೂ ಆಕ್ರೋಶಕ್ಕೆ ಕಾರಣವಾಗಿರುವ ವಿದೇಶಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲೀಕೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ಕೊಪ್ಪಳ (Koppal) ಗಂಗಾವತಿ ನ್ಯಾಯಾಲಯ ಆದೇಶ ನೀಡಿದೆ. ಮಲ್ಲೇಶ್, ಚೇತನಸಾಯಿ, ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಬಂಧಿತ ಮೂವರು ಆರೋಪಿಗಳನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ರಾತ್ರಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಹೀಗಾಗಿ ಆರೋಪಿಗಳು ಕೊಪ್ಪಳ ಜೈಲು ಸೇರಿದ್ದಾರೆ.