ಕೊಪ್ಪಳ: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕಲಕೇರಿ ಗ್ರಾಮದ ಗ್ರಾಮಸ್ಥರು ಕುಡಿವ ನೀರಿನಲ್ಲಿ ಹುಳುಗಳು ಕಂಡು ಆತಂಕಕ್ಕೊಳಗಾಗಿದ್ದಾರೆ. ಕಳೆದ 10 ದಿನಗಳಿಂದ ಈ ಸಮಸ್ಯೆ ಗ್ರಾಮದಲ್ಲಿ ತೀವ್ರವಾಗಿ ಕಾಣುತ್ತಿದೆ.
ಗ್ರಾಮಸ್ಥರು ಈ ಕುರಿತು ಎಚ್ಚರಿಕೆ ನೀಡಿದ್ದು, ರೋಗ ಹರಡುವ ಸಾಧ್ಯತೆ ಇದೆ ಎಂಬ ಭಯವನ್ನು ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ಪರಿಶೀಲನೆಯ ಪ್ರಕಾರ, ಗ್ರಾಮದ ನೀರು ಸರಬರಾಜು ಮಾಡುವ ಟ್ಯಾಂಕ್ ಸ್ವಚ್ಛಗೊಳಿಸದಿದ್ದುದರಿಂದ ನೀರಿನಲ್ಲಿ ಹುಳುಗಳು ಕಾಣಿಸುತ್ತಿವೆ ಎನ್ನಲಾಗಿದೆ.
ಗ್ರಾಮ ಪಂಚಾಯತಿ ನಿರ್ಲಕ್ಷ್ಯದ ವಿರುದ್ಧ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗ್ರಾಮಸ್ಥರು ಸಮಸ್ಯೆ ಶೀಘ್ರ ಪರಿಹಾರ ಪಡೆಯುವಂತೆ ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗ | ಆಕಸ್ಮಿಕವಾಗಿ ಹೊತ್ತಿ ಉರಿದ ಖಾಸಗಿ ನಾನ್ ಎಸಿ ಸ್ಲೀಪರ್ ಬಸ್ ; 36 ಮಂದಿಗೆ ಗಾಯ



















