ಬೆಂಗಳೂರು: ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ (KPCL Recruitment 2025) ಖಾಲಿ ಇರುವ ಮೆಡಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 5 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)
ಹುದ್ದೆಗಳ ಹೆಸರು: ಮೆಡಿಕಲ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆಗಳು: 05
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 26
ಫ್ಯಾಕ್ಟರಿ ಮೆಡಿಕಲ್ ಆಫೀಸರ್, ಮೆಡಿಕಲ್ ಆಫೀಸರ್, ಅಕೌಂಟ್ಸ್ ಆಫೀಸರ್, ಬಾಯ್ಲರ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಎಂಬಿಬಿಎಸ್, ಸಿಎ, ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 2.03 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಕನಿಷ್ಠ 18ರಿಂದ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ kpcl.karnataka.gov.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ kpclbacklog@gmail.com ಮೇಲ್ ಮಾಡಬೇಕು.
ಇದನ್ನೂ ಓದಿ : ಕೇಂದ್ರ ಸರ್ಕಾರದ BDLನಲ್ಲಿ 80 ಹುದ್ದೆಗಳು : ಬಿ.ಇ ಮುಗಿಸಿದವರಿಗೆ ಶುಭ ಸುದ್ದಿ



















