ಬೆಂಗಳೂರು : ರಾಜ್ಯ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕರ್ನಾಟಕ ಲೋಕಸೇವಾ ಆಯೋಗವು (KPSC Recruitment 2026) 83 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅಸಿಸ್ಟಂಟ್ ಕಂಟ್ರೋಲರ್ ಹಾಗೂ ಆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ಒಟ್ಟು ಹುದ್ದೆಗಳು: 83
ಹುದ್ದೆಗಳ ಹೆಸರು: ಅಸಿಸ್ಟಂಟ್ ಕಂಟ್ರೋಲರ್ ಹಾಗೂ ಆಡಿಟ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 26
15 ಅಸಿಸ್ಟಂಟ್ ಕಂಟ್ರೋಲರ್ ಹಾಗೂ 68 ಆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಂ.ಕಾಂ ಹಾಗೂ ಎಂಬಿಎ ಪಡೆದಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 21 ವರ್ಷದಿಂದ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.55 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 5 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಜನರಲ್ ಕೆಟಗರಿಯವರಿಗೆ 600 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 300 ರೂ., ಮಾಜಿ ಸೈನಿಕರಿಗೆ 50 ರೂ. ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು kpsc.kar.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಕೇಂದ್ರದ BEML ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕ : ಬೆಂಗಳೂರಲ್ಲೇ 1.4 ಲಕ್ಷ ರೂ. ಸಂಬಳದ ಉದ್ಯೋಗ



















