ಮಂಡ್ಯ: ಸಾರಿಗೆ ಬಸ್ (KSRTC Bus) ಡಿಕ್ಕಿ ಹೊಡೆದ ಪರಿಣಾಮ ಕೆಪಿಟಿಸಿಎಲ್ (ಟಿಎಲ್‍ಐ) ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮಳವಳ್ಳಿ ತಾಲೂಕಿನ ಕಣಿಗಲ್ ಗೇಟ್ ಹತ್ತಿರ ನಡೆದಿದೆ. ಸಾವನ್ನಪ್ಪಿದ ಅಧಿಕಾರಿ ಮಳವಳ್ಳಿ ತಾಲೂಕಿನ ಮಂಚನಹಳ್ಳಿ ಗ್ರಾಮದ ಪಿ.ರವಿ (42) ಎಂದು ಗುರುತಿಸಲಾಗಿದೆ. ಶಿವನಸಮುದ್ರ ಹತ್ತಿರ ಕೆಪಿಟಿಸಿಎಸ್‍ನ (KPTCL) ವಿಭಾಗದಲ್ಲಿ ಕಿರಿಯ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರವಿ ತಮ್ಮ ಬೈಕ್ ನಲ್ಲಿ ಮಳವಳ್ಳಿ ಪಟ್ಟಣಕ್ಕೆ ಹೋಗಿ ಮಂಚನಹಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ರಸ್ತೆ ಮಧ್ಯೆ ರವಿ ಮರದ ಕೆಳಗೆ ಬೈಕ್ ನಿಲ್ಲಿಸಿ ಹಣ್ಣು ಖರೀದಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮಳವಳ್ಳಿಯಿಂದ ಚಾಮರಾಜನಗರಕ್ಕೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರವಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಕುರಿತು ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.