ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನಲೆ ಕೃಷ್ಣಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಮಳೆಯ ಅಬ್ಬರಕ್ಕೆ ಕೃಷ್ಣಾ ನದಿ ಒಳ ಹರಿವಿನಲ್ಲಿ ಒಂದೇ ರಾತ್ರಿ ಸುಮಾರು 35 ಸಾವಿರ ಕ್ಯೂಸೆಕ್ ನೀರು ಹೆಚ್ಚಳವಾಗಿದೆ.
ಕೃಷ್ಣಾನದಿಯ ನೀರಿನ ಒಳ ಹರಿವು ಒಟ್ಟು 1 ಲಕ್ಷ 12 ಸಾವಿರ ಕ್ಯೂಸೆಕ್ ಗೆ ದಾಟಿದ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣಾ ನದಿ ದಡದಲ್ಲಿರುವ ದತ್ತ ದೇವಸ್ಥಾನ ಮುಳುಗಡೆಯಾಗಿದೆ.



















