ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ (KSCCF Recruitment 2025) ಖಾಲಿ ಇರುವ 34 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೇಲ್ಸ್ ಅಸಿಸ್ಟೆಂಟ್, ಫಾರ್ಮಾಸಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF)
ಹುದ್ದೆಗಳ ಹೆಸರು: ಸೇಲ್ಸ್ ಅಸಿಸ್ಟೆಂಟ್, ಫಾರ್ಮಾಸಿಸ್ಟ್
ಒಟ್ಟು ಹುದ್ದೆಗಳು: 34
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ಸೆಪ್ಟೆಂಬರ್ 14
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಯಾವುದೇ ಮಂಡಳಿಗಳಲ್ಲಿ ದ್ವಿತೀಯ ಪಿಯುಸಿ, ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಕನಿಷ್ಠ 18 ವರ್ಷದಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಫಾರ್ಮಾಸಿಸ್ಟ್ 7, ಫಸ್ಟ್ ಡಿವಿಷನ್ ಅಸಿಸ್ಟಂಟ್ 10 ಹಾಗೂ ಸೇಲ್ಸ್ ಅಸಿಸ್ಟಂಟ್ 17 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 16 ಸಾವಿರ ರೂಪಾಯಿಯಿಂದ 29,600 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಕೆಟಗರಿ 2ಎ, 2ಬಿ, 3ಎ, 3ಬಿ ವರ್ಗದವರಿಗೆ 3 ವರ್ಷ, ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 500 ರೂಪಾಯಿ ಹಾಗೂ ಉಳಿದ ಸಮುದಾಯದವರಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು https://virtualofficeerp.com/ksccf2025/instruction ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.



















