ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತದಲ್ಲಿ ಖಾಲಿ ಇರುವ 34 ಹುದ್ದೆಗಳ ನೇಮಕಾತಿಗಾಗಿ (KSCCF Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 34 ಕ್ಲರ್ಕ್, ಸೇಲ್ಸ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ (KSCCF)
ಹುದ್ದೆ ಹೆಸರು: ಕ್ಲರ್ಕ್, ಸೇಲ್ಸ್ ಅಸಿಸ್ಟಂಟ್
ಒಟ್ಟು ಹುದ್ದೆ: 34
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 7
7 ಫಾರ್ಮಾಸಿಸ್ಟ್, 10 ಫಸ್ಟ್ ಡಿವಿಷನ್ ಅಸಿಸ್ಟಂಟ್, 17 ಸೇಲ್ಸ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪಿಯುಸಿ, ಪದವಿ ಹಾಗೂ ಫಾರ್ಮಸಿಯಲ್ಲಿ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 52,650 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ ksccsf.org/index.html ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ನಂತರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ | ಮೈಸೂರಿನಲ್ಲೇ ಕೆಲಸ



















