ಬೆಂಗಳೂರು : ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯುವ ಹುದ್ದೆ ಗಿಟ್ಟಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ.
ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ (KSDA Recruitment 2026) ಖಾಲಿ ಇರುವ 890 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಅಗ್ರಿಕಲ್ಚುರಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಕೃಷಿ ಇಲಾಖೆ
ಹುದ್ದೆ ಹೆಸರು: ಅಸಿಸ್ಟಂಟ್ ಅಗ್ರಿಕಲ್ಚುರಲ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆಗಳು: 890
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 10
121 ಅಗ್ರಿ ಕಲ್ಚುರಲ್ ಆಫೀಸರ್, 769 ಅಸಿಸ್ಟಂಟ್ ಅಗ್ರಿಕಲ್ಚುರಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಎಸ್ಸಿ ಅಗ್ರಿ, ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 21ರಿಂದ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 750 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಕನ್ನಡ ಭಾಷಾ ಪ್ರೌಢಿಮೆ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 69,250 – 1,34,200 ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು raitamitra.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಮುಂದಿನ 3 ದಿನ ಹೀಟ್‌ವೇವ್ – ಕರಾವಳಿ ಜನರಿಗೆ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ!


















