ಬೆಂಗಳೂರು : ನೀವೇನಾದರೂ ಬಿಎಸ್ಸಿ ಅಗ್ರಿ, ಬಿ.ಟೆಕ್ ಕೋರ್ಸ್ ಮುಗಿಸಿ ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ (KSDA Recruitment 2026) ಖಾಲಿ ಇರುವ 945 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಗ್ರಿಕಲ್ಚುರಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಕೃಷಿ ಇಲಾಖೆ
ಹುದ್ದೆ ಹೆಸರು: ಅಗ್ರಿಕಲ್ಚುರಲ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆಗಳು: 945
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 20
128 ಅಗ್ರಿ ಕಲ್ಚುರಲ್ ಆಫೀಸರ್, 817 ಅಸಿಸ್ಟಂಟ್ ಅಗ್ರಿಕಲ್ಚುರಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಎಸ್ಸಿ ಅಗ್ರಿ, ಬಿ.ಟೆಕ್ ಬಯೋಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 21ರಿಂದ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 69,250 – 1,34,200 ರೂ.ವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 750 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು raitamitra.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಬೆಂಗಳೂರಿನ DRDO ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ : 37 ಸಾವಿರ ರೂ. ಸಂಬಳ



















