ಬೆಂಗಳೂರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ರಿಜಿಸ್ಟ್ರಾರ್ ಹಾಗೂ ಅಡಿಷನಲ್ ರಿಜಿಸ್ಟ್ರಾರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕ ಸರ್ಕಾರದ ಹುದ್ದೆಗಳನ್ನು ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದು ಸಿಹಿ ಸುದ್ದಿ ಆಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಜ್ಯ ಮಾನವ ಹಕ್ಕುಗಳ ಆಯೋಗ
ಒಟ್ಟು ಹುದ್ದೆಗಳು: 02
ಅರ್ಜಿ ಸಲ್ಲಿಕೆ ಮಾದರಿ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 17
ಉದ್ಯೋಗದ ಸ್ಥಳ: ದೇಶಾದ್ಯಂತ
ಒಂದು ರಿಜಿಸ್ಟ್ರಾರ್ ಹಾಗೂ ಒಂದು ಅಡಿಷನಲ್ ರಿಜಿಸ್ಟ್ರಾರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಹೈಕೋರ್ಟ್, ಜಿಲ್ಲಾ ನ್ಯಾಯಾಲಯ ಅಥವಾ ಸೆಷನ್ಸ್ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಂದು ವರ್ಷದ ಅವಧಿಗಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ kshrc.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ,3ನೇ ಮಹಡಿ, 5ನೇ ಹಂತ, ಬಹುಮಹಡಿ ಕಟ್ಟಡ,ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು – 560001. ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು secretary-kshrc@karnataka.gov.in ಗೆ ಮೇಲ್ ಕೂಡ ಮಾಡಬಹುದು.



















