ಬೆಂಗಳೂರು : ನೀವೇನಾದರೂ LLB ಮುಗಿಸಿ ರಾಜ್ಯ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (KSLSA Recruitment 2026) ಖಾಲಿ ಇರುವ 29 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 29 ಡೆಪ್ಯೂಟಿ ಲೀಗಲ್ ಏಡ್ ಡಿಫೆನ್ಸ್ ಕೌನ್ಸೆಲ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ
ಒಟ್ಟು ಹುದ್ದೆಗಳು: 29
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಡೆಪ್ಯೂಟಿ ಲೀಗಲ್ ಏಡ್ ಡಿಫೆನ್ಸ್ ಕೌನ್ಸೆಲ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 8
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ
26 ಡೆಪ್ಯೂಟಿ ಲೀಗಲ್ ಏಡ್ ಡಿಫೆನ್ಸ್ ಕೌನ್ಸೆಲ್, 1 ಚೀಫ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸೆಲ್ ಹಾಗೂ 2 ಅಸಿಸ್ಟಂಟ್ ಡೆಪ್ಯೂಟಿ ಲೀಗಲ್ ಏಡ್ ಡಿಫೆನ್ಸ್ ಕೌನ್ಸೆಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು, ಬಾಗಲಕೋಟೆ, ಕಲಬುರಗಿ, ಯಾದಗಿರಿ, ಶಿವಮೊಗ್ಗ, ರಾಮನಗರ ಸೇರಿ ರಾಜ್ಯದ ಹಲವೆಡೆ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಲ್ ಎಲ್ ಬಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿಯಿಂದ 80 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರು ಮೊದಲಿಗೆ kslsa.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ The Office of The Member Secretary, District Legal Services Authority (DLSA) ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ kslsa.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಬಂಗಾಳದಲ್ಲಿ ಮಧ್ಯರಾತ್ರಿ EVM ಹೈಡ್ರಾಮಾ : ಸ್ಟ್ರಾಂಗ್ ರೂಮ್‌ಗೆ ಮಮತಾ ಭೇಟಿ.. TMC ಪ್ರತಿಭಟನೆ


















