ಬೆಂಗಳೂರು : ಕರ್ನಾಟಕ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 41 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 41 ಎಂಜಿನ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP)
ಒಟ್ಟು ಹುದ್ದೆಗಳ ಸಂಖ್ಯೆ : 41
ಉದ್ಯೋಗ ಸ್ಥಳ : ಬೆಂಗಳೂರು, ಉಡುಪಿ
ಹುದ್ದೆ ಹೆಸರು : ಎಂಜಿನ್ ಡ್ರೈವರ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ : ಜೂನ್ 6
ಬೋಟ್ ಕ್ಯಾಪ್ಟನ್, ಅಸಿಸ್ಟಂಟ್ ಬೋಟ್ ಕ್ಯಾಪ್ಟನ್, ಎಂಜಿನ್ ಡ್ರೈವರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪೊಲೀಸ್ ಕಾನ್ ಸ್ಟೆಬಲ್ ಹಾಗೂ ಹೆಡ್ ಕಾನ್ ಸ್ಟೆಬಲ್ ದರ್ಜೆಯ ಹುದ್ದೆಗಳು ಇವಾಗಿವೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ, ಬಿಸಿಎ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 75 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ ksp.karnataka.gov.in ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಪೊಲೀಸ್ ಅಧೀಕ್ಷಕರು,
ಕರಾವಳಿ ಭದ್ರತಾ ಪೊಲೀಸ್,
ಉಡುಪಿ ಮತ್ತು ಸದಸ್ಯ ಕಾರ್ಯದರ್ಶಿಗಳು,
ತಾಂತ್ರಿಕ ಹುದ್ದೆಗಳ ವಿಶೇಷ ನೇಮಕಾತಿ ಸಮಿತಿ, ಮಾಲ್ಪೆ, ಉಡುಪಿ
ಇದನ್ನೂ ಓದಿ : ಸರ್ಕಾರಿ ಬ್ಯಾಂಕ್‌ಗಳಿಂದ ಸಾಲದ ವಿಚಾರದಲ್ಲಿ ದೊಡ್ಡ ಸಾಧನೆ : ಇದರಿಂದ ಸಾರ್ವಜನಿಕರಿಗೇನು ಲಾಭ?



















