ಬೆಂಗಳೂರು: ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಕರ್ನಾಟಕದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ. ರಾಜ್ಯ ಪೊಲೀಸ್ ಇಲಾಖೆಯು 1,600 ಶಸಸ್ತ್ರ ಪೊಲೀಸ್ ಕಾನ್ ಸ್ಟೆಬಲ್ (KSP Recruitment 2026) ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು: ಸಶಸ್ತ್ರ ಪೊಲೀಸ್ ಕಾನ್ ಸ್ಟೆಬಲ್
ಒಟ್ಟು ಹುದ್ದೆಗಳು: 1,600
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 22
ಕಲ್ಯಾಣ ಕರ್ನಾಟಕ ಭಾಗದಲ್ಲಿ 179 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇನ್ನು, ಕಲ್ಯಾಣ ಕರ್ನಾಟಕ ಹೊರತಾದ ಭಾಗಗಳಲ್ಲಿ 1,421 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪಿಯುಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 76 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಒಬಿಸಿ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ತಪಾಸಣೆ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಕನಿಷ್ಠ 18ರಿಂದ 33 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ ksp.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು



















