ಬೆಂಗಳೂರು: ಕರ್ನಾಟಕ ಸರ್ಕಾರದ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪೊಲೀಸ್ ಇಲಾಖೆಯಲ್ಲಿ ಖಾಲಿ (KSP Recruitment 2025) ಇರುವ 5 ಡಿಜಿಟಲ್ ಫೊರೆನ್ಸಿಕ್ ಅನಾಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರೊಂದಿಗೆ ಸರ್ಕಾರಿ ಉದ್ಯೋಗಕ್ಕಾಗಿ ಕಾದು ಕುಳಿತವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ.
ಹುದ್ದೆಗಳ ವಿವರ
ನೈಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
ಒಟ್ಟು ಹುದ್ದೆ: 05
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 29
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಸಿಎ, ಬಿ.ಇ, ಬಿ.ಟೆಕ್, ಎಂಸಿಎ ಅಥವಾ ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನಿಷ್ಠ 25 ಹಾಗೂ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂ. ವೇತನ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮೊದಲಿಗೆ ksp.karnataka.gov.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ No. 01, Infantry Road, Commissioner of Police, Bengaluru-560001 ವಿಳಾಸಕ್ಕೆ ಕಳುಹಿಸಬೇಕು. ಇಲ್ಲವೇ, ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು dcpadminbcp@ksp.gov.in ಗೆ ಇ-ಮೇಲ್ ಮಾಡಬಹುದು.