ಬೆಂಗಳೂರು : ನೀವು ಹಾವೇರಿ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ (KSRLPS Recruitment 2026) ಖಾಲಿ ಇರುವ 34 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ (KSRLPS)
ಒಟ್ಟು ಹುದ್ದೆಗಳು: 34
ಹುದ್ದೆಗಳ ಹೆಸರು: ಕ್ಲಸ್ಟರ್ ಸೂಪರ್ ವೈಸರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 11
ಉದ್ಯೋಗ ಸ್ಥಳ: ಹಾವೇರಿ
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಎಂಎಸ್ಸಿ, ಪಿ.ಜಿ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ ksrlps.karnataka.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ ; ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ



















