ಧಾರವಾಡ : ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್ ಆಗಿ KSRTC ಬಸ್ ಪಲ್ಟಿಯಾದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಧಾರವಾಡದ ಅಮ್ಮಿನಬಾವಿ ಗ್ರಾಮದ ಬಳಿ ನಡೆದಿದೆ.
ಮೃತ ಮಹಿಳೆಯನ್ನು ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಹುಸೇನಾಬಿ ಕೆಂಗನೂರ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಹಲವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡದಿಂದ ಮಿರಜ್ಗೆ ತೆರಳುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿ ಪಲ್ಟಿಯಾಗಿದೆ. ಘಟನೆಯಲ್ಲಿ ಮಹಿಳೆಯರು, ವೃದ್ಧರು ಸೇರಿ ಸುಮಾರು 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅಪಘಾತ ನಡೆದ ಕೂಡಲೇ ಇತರ ವಾಹನಗಳ ಸವಾರರು ಮತ್ತು ಸ್ಥಳೀಯರು ಬಸ್ನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ. ಅಪಘಾತದ ತೀವ್ರತೆಗೆ ಬಸ್ನ ಗ್ಲಾಸ್ಗಳು ಪೀಸ್ ಪೀಸ್ ಆಗಿದ್ದು, ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್ ವಿರುದ್ದ ಆರ್.ಅಶೋಕ್ ಆಕ್ರೋಶ!


















