ಚಾಮರಾಜನಗರ : ಚಾ.ನಗರದಲ್ಲಿ ಭೀಕರ ದುರಂತ ಸಂಭವಿಸಿದ್ದು, ಮಲೆ ಮಹದೇಶ್ವರ ಬೆಟ್ಟದ ಘಾಟಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದಿದೆ. ಮಹದೇಶ್ವರ ಬೆಟ್ಟ ಮತ್ತು ತಾಳಬೆಟ್ಟದ ನಡುವೆ ಈ ದುರ್ಘಟನೆ ನಡೆದಿದೆ.

ಮೈಸೂರು ಡಿಪೋಗೆ ಸೇರಿದ ಈ ಬಸ್ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ವಾಪಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಘಾಟಿ ರಸ್ತೆಯ ತಿರುವುಗಳಲ್ಲಿ ವೇಗ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆಯ ಪರಿಣಾಮವಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.
ಸದ್ಯ ಗಾಯಾಳುಗಳನ್ನು ಮಹದೇಶ್ವರ ಬೆಟ್ಟ ಹಾಗೂ ಹನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಹಲವು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ – ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್!



















