ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ (KUD Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಪ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 9 ಕೊನೆಯ ದಿನವಾಗಿರುವ ಕಾರಣ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಹುದ್ದೆಗಳ ಹೆಸರು: ಅತಿಥಿ ಉಪನ್ಯಾಸಕರು
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 9
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಡ್, ಎಲ್ ಎಲ್ ಬಿ, ಬಿ.ಎ, ಬಿ.ಕಾಂ, ಬಿ.ಪಿಎಡ್ ಸೇರಿ ಯಾವುದೇ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 600 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್‌ಸೈಟ್ https://kud.ac.in/kan/ ಗೆ ಭೇಟಿ ನೀಡಬೇಕು
ಅತಿಥಿ ಉಪನ್ಯಾಸಕ ಹುದ್ದೆಯ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೆಕು.
ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಬೇಕು
ಅರ್ಜಿ ನಮೂನೆಯನ್ನು ಮತ್ತು ದಾಖಲೆಗಳನ್ನು Principal of Concerned Constituent College of Karnatak University, Dharwad, Karnataka ವಿಳಾಸಕ್ಕೆ ಕಳುಹಿಸಬೇಕು


















