ಬೆಂಗಳೂರು: ಧಾರವಾಡದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ (KUD Recruitment 2026) ಖಾಲಿ ಇರುವ 6 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಪ್ರೊಫೆಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಧಾರವಾಡದಲ್ಲಿಯೇ ಉದ್ಯೋಗ ಪಡೆಯಲು ಬಯಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಹುದ್ದೆ ಹೆಸರು: ಅಸಿಸ್ಟಂಟ್ ಪ್ರೊಫೆಸರ್ ಇತ್ಯಾದಿ
ಒಟ್ಟು ಹುದ್ದೆ: 6
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 30
2 ಅಸಿಸ್ಟಂಟ್ ಪ್ರೊಫೆಸರ್, 1 ಪ್ರಾಜೆಕ್ಟ್ ಅಸೋಸಿಯೇಟ್, 1 ಆಫೀಸ್ ಅಸಿಸ್ಟಂಟ್ ಕಮ್ ಕಂಪ್ಯೂಟರ್ ಆಫರೇಟರ್ ಹಾಗೂ 1 ಲೈಬ್ರರಿ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ, ಸ್ನಾತಕೋತ್ತರ ಪದವಿ, ಕೆ ಸೆಟ್ ಅಥವಾ ನೆಟ್, ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ 35ರಿಂದ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 57,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆwww.kud.ac.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು pmeb@kud.ac.inಗೆ ಮೇಲ್ ಮಾಡಬೇಕು.



















